Breaking
25 Sep 2026, Fri

ಖಾಸಗಿ ಸ್ಲೀಪರ್ ಬಸ್ ಗೆ ತಗುಲಿದ ಬೆಂಕಿ: ಇಬ್ಬರು ಸಾವು

ಜೈಪುರ: ಜೈಪುರ-ದೆಹಲಿ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಗೆ ಬೆಂಕಿ ತಗುಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿನತ್ತ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿಗೆ ವಿದ್ಯುತ್‌ ತಂತಿ ಸ್ಪರ್ಶಿಸಿ ಬಸ್‌ಗೆ ಬೆಂಕಿ ತಗುಲಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ದಾರಿಹೋಕರು ಮತ್ತು ಸ್ಥಳೀಯರು ಸಹಾಯಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರತೆಗೆಯಲಾಯಿತು.

ಘಟನೆಯಲ್ಲಿ ಸುಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *