Breaking
23 Mar 2026, Mon

ನ.08 ಸಂಗಬೆಟ್ಟುವಿನಲ್ಲಿ ದ. ಕ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಸ್ಥೆಯ ನೂತನ 14ನೇ ಶಾಖೆ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಸ್ಥೆಯ ನೂತನ 14 ನೇ ಶಾಖೆಯು ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನ ಸುದರ್ಶನ ಕಾಂಪ್ಲೆಕ್ಸ್ ನಲ್ಲಿ ನ. 8 ರಂದು ಉದ್ಘಾಟನೆಗೊಳ್ಳಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಜೈನ್ ಇವರ ಉಪಸ್ಥಿತಿಯಲ್ಲಿ ಸ್ಥಳೀಯ ಶ್ರೀ ವೀರಭದ್ರ ದೇವಸ್ಥಾನದ ಮೊಕ್ತೇಸರರಾದ ಚಂದ್ರಹಾಸ ಶೆಟ್ಟಿಗಾರ್ ಮತ್ತು ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರು ಬಿಡುಗಡೆಗೊಳಿಸಿದರು.

ನ. 8 ಶನಿವಾರ ಬೆಳಿಗ್ಗೆ ಜರಗುವ ಉದ್ಘಾಟನಾ ಸಮಾರಂಭದಲ್ಲಿ ಪರಮಪೂಜ್ಯ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಶ್ರೀ ಜೈನ ಮಠ ಮೂಡಬಿದ್ರಿ ಇವರ ಉಪಸ್ಥಿತಿಯೊಂದಿಗೆ, ಬಂಟ್ವಾಳ ಶಾಸಕ ಯು.ರಾಜೇಶ್ ನಾಯಕ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಶಾಖೆಯನ್ನು ಉದ್ಘಾಟಿಸಲಿದ್ದು ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ಈ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ, ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್, ಗ್ರಾಮ ಪಂಚಾಯತ್ ಸದಸ್ಯರಾದ ವಿಮಲಾ ಮೋಹನ್, ಕಟ್ಟಡ ಮಾಲೀಕರಾದ ನಾಗೇಶ್ ಶೆಟ್ಟಿಗಾರ್, ವೀರಭದ್ರ ದೇವಸ್ಥಾನದ ಮೇಲ್ವಿಚಾರಕರಾದ ತುಕಾರಾಮ ಶೆಟ್ಟಿಗಾರ್, ಸಂಸ್ಥೆಯ ಉಪಾಧ್ಯಕ್ಷರಾದ ಮಂಜುನಾಥ ರೈ, ನಿರ್ದೇಶಕರಾದ ಗಜೇಂದ್ರ ಪ್ರಭು, ಹೇಮಂತ್ ಕುಮಾರ್ ಜೈನ್, ರವೀಂಧ್ರ ಬಿ, ಮೈಕೆಲ್ ಡಿಕೋಸ್ತ, ಡಾ. ಸುದೀಪ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್
ಕುಮಾರ್, ಆಂತರಿಕ ಲೆಕ್ಕಪರಿಶೋಧಕರಾದ ಶ್ರೀಧರ್ ಶೆಟ್ಟಿ, ಹಿರಿಯ ಪ್ರಬಂಧಕರಾದ ಮೋಹನ್ ಜಿ. ಮೂಲ್ಯ, ಪ್ರಬಂಧಕರುಗಳಾದ ಸಪ್ನಾ ಚಂದ್ರಪ್ರಭಾ, ನಿಶಾ ದಿನಕರ್, ಸಂದೇಶ್, ಶುಭಲಕ್ಷ್ಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಿರ್ದೇಶಕರಾದ ಡಾ. ಸುದೀಪ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಪ್ರಬಂಧಕ ಮೋಹನ್ ಜಿ. ಮೂಲ್ಯ ವಂದಿಸಿದರು.

Leave a Reply

Your email address will not be published. Required fields are marked *