ಧರ್ಮಸ್ಥಳದಲ್ಲಿ ಕಾರು ಬೈಕ್ ನಡುವೆ ಅಪಘಾತ

ಧರ್ಮಸ್ಥಳ: ಕಾರು ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ವೇತಾ ಲಾಡ್ಜ್ ಸಮೀಪ ಇಂದು(ಅ.29) ನಡೆದಿದೆ.

ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಾಯಗೊಂಡ ಸವಾರರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *