Breaking
22 Mar 2026, Sun

ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗಿರಿಧರ ರೈ ಎಂದು ಗುರುತಿಸಲಾಗಿದೆ.

ಅ.26 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಎಸಗಿರುವ ಬಗ್ಗೆ ಗಿರಿಧರ ರೈ ಎಂಬಾತನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದ್ಯ, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *