Breaking
19 Sep 2026, Sat

ಮಂಗಳೂರು: 20 ವರ್ಷದ ಯುವತಿ ನಾಪತ್ತೆ

ಮಂಗಳೂರು: 20 ವರ್ಷದ ಯುವತಿಯೋರ್ವಳು ಕಾಣೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುರತ್ಕಲ್ ನ ಕೃಷ್ಣಾಪುರ ನಿವಾಸಿ ಅನನ್ಯ(20) ಕಾಣೆಯಾದ ಯುವತಿ.

ಅ. 25 ರಂದು ತಂದೆ, ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೊರ ಹೋಗಿದ್ದು, ಅವರು ಮಧ್ಯಾಹ್ನ ವಾಪಸ್‌ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಪುತ್ರಿ ಅನನ್ಯ ಇರಲಿಲ್ಲ. ಈ ಬಗ್ಗೆ ಆಸುಪಾಸಿನ ಮನೆಯವನ್ನು ವಿಚಾರಿಸಿದರೂ ಮಾಹಿತಿ ಸಿಗದ ಕಾರಣ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈಕೆ ಕಾರ್ತಿಕ್ ಎಂಬಾತನನ್ನು ಪ್ರೀತಿಸುತ್ತಿದ್ದು, ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದರು ಎಂದು ತಿಳಿದು ಬಂದಿದೆ.

ಕಾಣೆಯಾಗಿರುವ ಯುವತಿ 5.3 ಅಡಿ ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಹಳದಿ ಬಣ್ಣದ ಪ್ಯಾಂಟ್ ಧರಿಸಿದ್ದಳು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾಳೆ.

ಯುವತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *