ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಸಂಗ್ರಹಿಸಿ ಮೋಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದು ಆರೋಪಿತರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿಗಳನ್ನು ಬೆಂಗಳೂರಿನ ಆನೇಕಲ್ ತಾಲೂಕಿನ ಪ್ರಕೃತಿ ಯು(34) ಹಾಗೂ ಕುಂದಾಪುರ ಉಡುಪಿ ತಾಲೂಕು ಆಲ್ಟನ್ ರೆಬೇರೋ (42) ಎಂದು ಗುರುತಿಸಲಾಗಿದೆ.
ಆರೋಪಿತರು ಕಾವೂರು ಠಾಣಾ ವ್ಯಾಪ್ತಿಯ ಹಲವರಿಗೆ ವಿದೇಶದಲ್ಲಿ ಉದ್ಯೋಗ ಹಾಗೂ ವೀಸಾ ಕೊಡಿಸುವುದಾಗಿ ನಂಬಿಸಿ, ಸುಮಾರು 1 ಕೋಟಿ ರೂ. ಹಣವನ್ನು ಪಡೆದುಕೊಂಡು ವೀಸಾ ಮತ್ತು ಉದ್ಯೋಗ ನೀಡದೆ ಜನರನ್ನು ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿತರಿಂದ 24 ಪಾಸ್‌ಪೋರ್ಟ್‌ಗಳು, 43 ಗ್ರಾಂ ಬಂಗಾರ ಹಾಗೂ 2 ಮೊಬೈಲ್ ಫೋನ್‌ಗಳು ವಶಪಡಿಸಿಕೊಂಡಿದ್ದಾರೆ. ಈ ವಸ್ತುಗಳನ್ನು ಆರೋಪಿತರು ಅಕ್ರಮವಾಗಿ ಇಟ್ಟುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.




