Breaking
19 Sep 2026, Sat

ಅತಿಥಿ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಶಾಲೆಯ ಅತಿಥಿ ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಕೃತ್ಯ ಎಸಗಿದ ಆರೋಪಿಯನ್ನು ಭವಿತ್ ಅಲಿಯಾಸ್ ರಮೇಶ್(30 ) ಎಂದು ಗುರುತಿಸಲಾಗಿದೆ.

ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ (25 ವ) ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ವೇಳೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದಲ್ಲದೆ ನಗ್ನಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿಕ್ಷಕಿಯ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಮನೆಯವರು ಮತ್ತು ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿಕ್ಷಕಿಯನ್ನು ತಕ್ಷಣವೇ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *