Breaking
19 Sep 2026, Sat

ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪ: ನಾಲ್ವರು ಪೊಲೀಸ್ ವಶಕ್ಕೆ

ಮಡಿಕೇರಿ : ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಸೋಮವಾರಪೇಟೆ ನಿವಾಸಿ ಸುಮಂತ್, ಕಿಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ.ಆ‌ರ್.ಪೇಟೆಯ ನಿವಾಸಿ ಸಚಿನ್‌ ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಗಳಿಂದ 2.4 ಲಕ್ಷ ರೂ. ಮೌಲ್ಯದ 360 ಕೆ.ಜಿ ಕಾಳು ಮೆಣಸು ಮತ್ತು ಕಳ್ಳತನಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *