Breaking
23 Mar 2026, Mon

ಕಾರು ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು

ಬೆಳ್ತಂಗಡಿ : ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತಪಟ್ಟವರು ನಾವೂರು ಗ್ರಾಮದ ಹೊಡಿಕ್ಕಾರು ನಿವಾಸಿ ಚಂದ್ರಹಾಸ (28) ಎಂದು ಗುರುತಿಸಲಾಗಿದೆ.

ಅ.29 ರ ಬೆಳಗ್ಗೆ ಚಂದ್ರಹಾಸ ಅವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕನ್ಯಾಡಿ ಸೇವಾ ಧಾಮದ ಎದುರಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಂದ್ರಹಾಸರವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣವೇ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *