ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ವಾಕಿಂಗ್ ಹೋಗುವ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಅ.29ರಂದು ನಡೆದಿದೆ.


ಬೆಳಿಗ್ಗೆ ಸುಲ್ಕೇರಿಯಿಂದ ನಾರಾವಿ ಕಡೆಗೆ ಸ್ಥಳೀಯ ನಿವಾಸಿ ಪೂರ್ಣೇಶ್ ಎಂಬವರು ವಾಕಿಂಗ್ ಹೋಗುವ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಪೂರ್ಣೇಶ್ ಅವರ ಕೈ ತುಂಡಾಗಿದ್ದು,ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



