ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನಾರಾಯ್ಕೆಯಾಗಿದ್ದಾರೆ.
2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಇನ್ನೆರಡು ಸ್ಥಾನಕ್ಕೆ ಅವಿರೋಧ:
ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಒಟ್ಟು ಒಂಬತ್ತು ಸ್ಥಾನಗಳಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಸಿ.ಲೋಕೇಶ್ ಮತ್ತು ಖಜಾಂಚಿ ಸ್ಥಾನಕ್ಕೆ ವಾಸುದೇವ ಹೊಳ್ಳ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಅಧಿಕೃತ ಘೋಣೆಯಷ್ಟೇ ಬಾಕಿ ಇದೆ.





