Breaking
23 Mar 2026, Mon

ಮದುವೆಯ ವಾಹನ ಪಲ್ಟಿ: ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯ

ಹಾಸನ: ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ವ್ಯಾನ್ ನಲ್ಲಿದ್ದವರು ಗಂಭೀರವಾಗಿ ಗಾಯವಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ನಲ್ಲಿ ನಡೆದಿದೆ.

ಈ ಮದುವೆಯ ವಾಹನವು ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿತ್ತು ಎಂದು ತಿಳಿದು ಬಂದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ.

ವಧು- ವರ ಇಬ್ಬರೂ ನಿನ್ನೆಯೇ ಹಾಲ್ ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *