Breaking
19 Sep 2026, Sat

ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿ ಸಾವು

ಮಂಗಳೂರು: ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್‌ನಲ್ಲಿ ಅ.30 ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕಾಟಿಪಳ್ಳ ಮೋರ್ ಸೂಪರ್ ಮಾರ್ಕೇಟ್ ಬಳಿಯ ನಿವಾಸಿ ಜಬ್ಬಾರ್ ಎಂದು ಗುರುತಿಸಲಾಗಿದೆ.

ಜಬ್ಬಾರ್ ಅವರು ಸೂರಜ್ ಹೋಟೆಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ ಸರ್ವಿಸ್ ರಸ್ತೆಯಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಾಹನದಿಂದ ರಸ್ತೆಗೆ ಬಿದ್ದರು ಎನ್ನಲಾಗಿದೆ.

ತಕ್ಷಣ ಸ್ಥಳೀಯರು ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *