ಮೂಡುಬಿದಿರೆ : ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೊಬ್ಬ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿ ಅ. 29 ರಂದು ರಾತ್ರಿ ನಡೆದಿದೆ.
ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್ ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದು ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ ಸಮಸ್ಯೆಯಿಂದಾಗಿ ಮೊದಲಿಗೆ ವಿಷ ಸೇವಿಸಿ ನಂತರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತ ರಾಜೇಶ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




