Breaking
19 Sep 2026, Sat

ಆಂಬುಲೆನ್ಸ್‌ಗೆ ದಾರಿ ಬಿಡದೆ ಹುಚ್ಚಾಟ ಮೆರೆದ ವ್ಯಕ್ತಿ ಬಂಧನ

ಬಂಟ್ವಾಳ:ಸಕಲೇಶಪುರದ ಬಿಸಿಲೆ ಘಾಟ್ ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಹುಚ್ಚಾಟ ಮೆರೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್ ಮನ್ಸೂರು 38 ವ ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಬಿಸಿ ರೋಡಿನ ಎನ್ ಜಿ ಸರ್ಕಲ್ ನಿಂದ ಸುಮಾರು ನಾಲ್ಕು ಕಿಲೋಮೀಟರ್ ವರೆಗೆ ಹುಚ್ಚಾಟ ಮೆರೆದಿದ್ದಾನೆ ಎಂದು ತಿಳಿದುಬಂದಿದೆ.

ಆಂಬುಲೆನ್ಸ್ ಚಾಲಕ ಹಾರ್ನ್ ಹಾಕಿದರೂ ಸೈರನ್ ಶಬ್ದ ಕೇಳಿಯೂ ಸಹ ದಾರಿ ಮಾಡಿಕೊಡದೆ ಆಂಬುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *