Breaking
23 Mar 2026, Mon

ಬಾನು ಮುಷ್ತಾಕ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿ ಬಂಧನ

ಮಂಗಳೂರು: ದಸರಾ ಉತ್ಸವ ಉದ್ಘಾಟಿಸಿದ ಬಾನು ಮುಷ್ತಾಕ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಪುರುಷೋತ್ತಮ ಆಚಾರ್ಯ ಎಂದು ಗುರುತಿಸಲಾಗಿದೆ.

ದಸರಾ ಉತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಮತ್ತು ಬರಹಗಾರ್ತಿ, ಕಾರ್ಯಕರ್ತೆ ಮತ್ತು ವಕೀಲೆ ಬಾನು ಮುಷ್ತಾಕ್ ಅವರನ್ನು ಗುರಿಯಾಗಿಸಿ ಅಸಭ್ಯ ಪದಗಳ ನಿಂದನೆ ಮಾಡಿದ್ದು ಈತನ ವಿರುದ್ದ ಸುಳ್ಯ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *