Breaking
19 Sep 2026, Sat

ಆಯತಪ್ಪಿ ಬಾವಿಗೆ ಬಿದ್ದು ಯುವಕ ಸಾವು

ಮೂಡುಬಿದಿರೆ: ಪಡುಮಾರ್ನಾಡು ಸಮೀಪದ ಮೊಡಂದೇಲ್ ನಲ್ಲಿ ಆಯತಪ್ಪಿ ಬಾವಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ. 30 ರಂದು ನಡೆದಿದೆ.

ಮೃತಪಟ್ಟ ಯುವಕನನ್ನು ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ (38) ಎಂದು ಗುರುತಿಸಲಾಗಿದೆ.

ಬಾವಿಗೆ ಆವರಣಗೋಡೆ ಇಲ್ಲದ ಕಾರಣ, ಅವರ ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.

ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *