Breaking
19 Sep 2026, Sat

ಕೆಲಸ ಮುಗಿಸಿ ವಿಶ್ರಾಂತಿಯಲ್ಲಿದ್ದ ಯುವಕ ಸಾವು

ಕಾಸರಗೋಡು: ಕೆಲಸ ಮುಗಿಸಿ ವಿಶ್ರಾಂತಿಯಲ್ಲಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಸೀತಾಂಗೋಳಿ ಬಳಿಯ ಮುಖಾರಿಗದ್ದೆ ಕೋಡಿಮೂಲೆಯ ಹರ್ಷ ರಾಜ್(26) ಎಂದು ಗುರುತಿಸಲಾಗಿದೆ.

ಅ.30 ರಂದು ನೀರ್ಚಾಲು ಸಮೀಪದ ರತ್ನಗಿರಿಯಲ್ಲಿ ವ್ಯಕ್ತಿಯೋರ್ವರ ಮನೆಯಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿ ಮದ್ಯಾಹ್ನ ಊಟ ಮುಗಿಸಿ ವಿಶ್ರಾಂತಿಯಲ್ಲಿದ್ದ ವೇಳೆ ಹರ್ಷರಾಜ್ ಗೆ ತಲೆ ಸುತ್ತಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು.

ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *