ಉಡುಪಿ: ಮನೆ ಬಿಟ್ಟು ಹೋದ ವ್ಯಕ್ತಿ ಮನೆಗೆ ವಾಪಾಸ್ಸಾಗದೇ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ಬನ್ನಂಜೆಯಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಆಟೋ ರಿಕ್ಷಾ ಚಾಲಕನಾಗಿದ್ದ ಮೊಹಮ್ಮದ್ ಶಾರೀಕ್ (30) ಎಂದು ಗುರುತಿಸಲಾಗಿದೆ.

ಕಾಣೆಯಾದ ಶಾರೀಕ್ 5 ಅಡಿ 5 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




