Breaking
22 Mar 2026, Sun

ಕಾಡಾನೆ ದಾಳಿಗೆ ಇಬ್ಬರು ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಅ. 31 ರಂದು ನಡೆದಿದೆ.

ಮೃತಪಟ್ಟವರು ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಎಂದು ಗುರುತಿಸಲಾಗಿದೆ.

ಇಬ್ಬರು ಬೆಳಿಗ್ಗೆ ಹಸುವಿನ ಕೊಟ್ಟಿಗೆಗೆ ಸೊಪ್ಪು ತರಲು ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Leave a Reply

Your email address will not be published. Required fields are marked *