Breaking
10 Aug 2026, Mon

ಮನೆಯಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು: ಲಕ್ಷಾಂತರ ರೂ. ಮೌಲ್ಯದ ಪಟಾಕಿ ಪೊಲೀಸ್ ವಶಕ್ಕೆ

ಉಡುಪಿ: ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡಬೆಟ್ಟು ದೇವಸ್ಥಾನ ಕಡೆಗೆ ಹೋಗುವ ರಸ್ತೆಯಲ್ಲಿರುವ ಕೇರಾ ಮೆಂಡೋನ್ಸ ಎಂಬವರ ಮನೆಯಲ್ಲಿ ಆರೋಪಿ ಗೌತಮ್ ಪ್ರಭು ಎಂಬಾತ ಅಕ್ರಮವಾಗಿ ಪಟಾಕಿ ದಾಸ್ತಾನು ಇರಿಸಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಒಟ್ಟು 2 ಲಕ್ಷ ರೂ.ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *