ವೇಣೂರು: ಶಿಕ್ಷಣ ಇಲಾಖೆಯ ವತಿಯಿಂದ ಪಿ. ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆಯಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರಿನ 8ನೇ ತರಗತಿಯ ವಿದ್ಯಾರ್ಥಿ ಶರ್ವಿನ್ ಮೋನಿಸ್ ಇವರು 60+ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಯನ್ನು ಶಾಲಾಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕಿ ಸಿ. ವೀರ ಡಿಸೋಜಾ, ಶಿಕ್ಷಕ – ಶಿಕ್ಷಕೇತರ ವೃಂದ, ಶಿಕ್ಷಕ-ರಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.





