ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಅ.30ರಂದು ಮೊಸಳೆ ಪ್ರತ್ಯಕ್ಷವಾಗಿದೆ.
ನದಿಯಲ್ಲಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರಿಗೆ ಮೊಸಳೆ ಕಂಡುಬಂದಿದ್ದು, ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಸ್ಥಳೀಯರು ನದಿಗೆ ಇಳಿಯುವ ಮುನ್ನ ಎಚ್ಚರ ವಹಿಸಬೇಕಾಗಿದೆ.




