Breaking
6 May 2026, Wed

ಉಳ್ಳಾಲದಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಢಿಕ್ಕಿ : ಸವಾರ ಸಾವು

ಉಳ್ಳಾಲ : ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಅಡಂ ಕುದ್ರು ಎಂಬಲ್ಲಿ ಅ. 31 ರಂದು ನಡೆದಿದೆ.

ಬೊಕ್ಕಪಟ್ಣ ಬೆಂಗ್ರೆ ನಿವಾಸಿ ನಾಗೇಶ್ ಪುತ್ರನ್(62) ಮೃತಪಟ್ಟ ದುರ್ದೈವಿ.

ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಾಗೇಶ್ ಅವರ ಸ್ಕೂಟರ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಗೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *