Breaking
22 Mar 2026, Sun

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅ.27 ರಂದು ಕಾಸರಗೋಡಿನ ಬಂದಡ್ಕದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಕೇರಳ ಗ್ರಾಮ ಗೌಡ ಸಮಿತಿ ಬಂದಡ್ಕ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 ಅಕ್ಟೋಬರ್, 27 ರಂದು ಬೆಳಗ್ಗೆ 9 ಗಂಟೆಗೆ ಕೇರಳ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ.

ಅಕ್ಟೋಬರ್, 27 ರಂದು ಬೆಳಗ್ಗೆ 9 ಗಂಟೆಗೆ ಬಂದಡ್ಕ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರದಿAದ ಮೆರವಣಿಗೆ ನಡೆಯಲಿದೆ. ಬಂದಡ್ಕ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊÊಂಗಾಜೆ ಅವರು ಉದ್ಘಾಟಿಸಲಿದ್ದಾರೆ. ಇಳಂದಿಲ ರವಿಪ್ರಸಾದ್, ಇತರರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಮಕ್ಕಳಿಂದ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪಂಕಜಾಕ್ಷ ಅಡ್ಕ ಅವರು ನಡೆಸಿಕೊಡಲಿದ್ದಾರೆ.

ನಂತರ ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ ಅವರು ಉದ್ಘಾಟಿಸಲಿದ್ದಾರೆ. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷರಾದ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ ಪಂಚಾಯತ್ ಸದಸ್ಯರಾದ ಬಿ.ಕೃಷ್ಣನ್, ಕುತ್ತಿಕೋಲು ಗ್ರಾ.ಪಂ.ಸದಸ್ಯರಾದ ಕುಂಞÂರಾಮನ್ ತವನಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ್, ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಭಾಷ್ಚಂದ್ರ ರೈ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಗ್ಗೆ 11 ಗಂಟೆಗೆ ಗಡಿಬಾಗಲಿ ಅರೆಭಾಷೆನ ಉಳ್ಸಿ-ಬೆಳ್ಸುವ ಕಾರ್ಯ ಎಂಬ ವಿಷಯದ ಬಗ್ಗೆ ಕವಯಿತ್ರಿ ಸ್ಮಿತಾ ಅಮೃತರಾಜ್ ಅವರು ಉಪನ್ಯಾಸ ನೀಡಲಿದ್ದಾರೆ. ನಂತರ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ, ಬಹುಭಾಷಾ ಕವಿಗೋಷ್ಠಿ ನಡೆಯಲಿದೆ.

ಮಧ್ಯಾಹ್ನ 2 ಗಂಟೆಯಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಪ್ರವೀಣ್ ಇಳಂದಿಲ ಅವರು ನಡೆಸಿಕೊಡಲಿದ್ದಾರೆ.
ಬಳಿಕ ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ, ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಉದುಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎಚ್.ಕುಂಞAಬು, ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪೂರ್ವಾಧ್ಯಕ್ಷರಾದ ಪಿ.ಸಿ.ಜಯರಾಮ, ಅರಂತೋಡು ತೆಕ್ಕಿಲ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ.ಶಹೀದ್, ಇತರರು ಪಾಲ್ಗೊಳ್ಳಲಿದ್ದಾರೆ.

ಶಿಕ್ಷಣ, ಕ್ರೀಡಾ ಕ್ಷೇತ್ರದ್ಲಿ ಮುತ್ತಣ್ಣ ಮಾಸ್ತರ್, ಸಹಕಾರ ಸೇವೆಗೆ ಮೋನಪ್ಪ ಗೌಡ ಇಳಂದಿಲ, ಶಿಕ್ಷಣ ಬಾಲಕೃಷ್ಣ ಮಾಸ್ತರ್, ಧಾರ್ಮಿಕ ಕ್ಷೇತ್ರದಲ್ಲಿ ಬೋಜಪ್ಪ ಗೌಡ ಪಾಲಾರುಮೂಲೆ, ಸಮಾಜ ಸೇವೆಗೆ ಪುರುಷೋತ್ತಮ ಬೊಡ್ಡನಕೊಚ್ಚಿ ಮತ್ತು ಕುತ್ತಿಕೋಲು ಗ್ರಾಮ ಪಂಚಾಯತ್ ಪ್ರಥಮ ಅರೆಭಾಷೆ ಮಹಿಳಾ ಜನಪ್ರತಿನಿಧಿ ಪಾಲಾರುಮೂಲೆ ಧರ್ಮಾವತಿ, ಅವರನ್ನು ಸನ್ಮಾನಿಸಲಾಗುತ್ತದೆ. ಕ್ರೀಡೆಗೆ ಯಕ್ಷಿತ್ ಬಾಲೆಂಬಿ ಅವರು ದಿ.ಗೋವಿಂದೇ ಗೌಡ ಸ್ಮರಣಾರ್ಥ ರಾಜ್ಯ ಅತ್ಯುತ್ತಮ ಪ್ರಶಸ್ತಿ ಪುರಸ್ಕೃತರಾಗಿರುತ್ತಾರೆ.

Leave a Reply

Your email address will not be published. Required fields are marked *