Breaking
21 Mar 2026, Sat

ರಾಂಗ್ ಸೈಡ್ ನಿಂದ ಬಂದ ಕಾರು ಬೈಕ್ ಗೆ ಢಿಕ್ಕಿ: ಇಬ್ಬರು ಸವಾರರು ಗಂಭೀರ

ಬಂಟ್ವಾಳ: ಬಿ.ಸಿ ರೋಡ್‌ ಸಮೀಪದ ತಲಪಾಡಿಯಲ್ಲಿ ರಾಂಗ್ ಸೈಡ್ ನಿಂದ ಬಂದ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಅಡ್ಯಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಮಿಫ್ಸ್ ಸಂಸ್ಥೆಯಲ್ಲಿ ಫೈರ್ ಅಂಡ್ ಸೇಫ್ಟಿ ಕೋರ್ಸ್ ಕಲಿಯುತ್ತಿರುವ ಇವರು ಕೋರ್ಸ್ ಮುಗಿಸಿ ಅಡ್ಯಾರ್ ನಿಂದ ವಿಟ್ಲದತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತಲಪಾಡಿಯಲ್ಲಿ ರಾಂಗ್ ಸೈಡ್ ನಲ್ಲಿ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ರಾಷ್ಟ್ರಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *