Breaking
19 Sep 2026, Sat

ಉಡುಪಿಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವು

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಡುಪಿಯ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ನಿವಾಸಿ ರಂಗಪ್ಪ (62) ಎಂದು ಗುರುತಿಸಲಾಗಿದೆ.

ರಂಗಪ್ಪ ಅವರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಅವರ ತಲೆಗೆ ಗಂಭೀರಗಾಯವಾಗಿದೆ.ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ರಂಗಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *