Breaking
21 Mar 2026, Sat

ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗೆ ಬ್ರೇಕ್

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅದೇ ರೀತಿ ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *