ವಿಟ್ಲ: ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ 2024-25 ನೇ ಸಾಲಿನ ರಾಜ್ಯಮಟ್ಟದ ಬಾಲಕ ಬಾಲಕಿಯರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವೈಟ್ ಲಿಫ್ಟಿಂಗ್ ಸ್ಪರ್ಧೆಯನ್ನು ಉದ್ಘಾಟನೆಗೊಂಡಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಮಂಜುನಾಥ್ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿ, ವಿಟ್ಲದಂತಹ ಗ್ರಾಮೀಣ ಭಾಗದಲ್ಲಿ ಚೊಚ್ಚಲ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಇಂತಹ ಕ್ರೀಡಾಕೂಟಗಳ ಮೂಲಕ ನೂರಾರು ಪ್ರತಿಭೆಗಳನ್ನು ದೇಶಕ್ಕೆ ನೀಡುವಂತಾಗಿದೆ, ಯಾವುದೇ ಸ್ಪರ್ಧೆಗಳಲ್ಲಿರುವ ಸೋಲು ಮತ್ತು ಗೆಲುವುಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದಾಗ ಮಾತ್ರ ಸಾಧನೆ ತೋರಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಶನ್ ಉಪಾಧ್ಯಕ್ಷ ಪುಷ್ಪರಾಜ್ ಹೆಗ್ಗಡೆ ಮಾತನಾಡಿ ರಾಜ್ಯದಲ್ಲಿ ವೈಟ್ ಲಿಫ್ಟಿಂಗ್ ಕ್ರೀಡೆಗೆ ಉತ್ತಮ ಅವಕಾಶವಿದ್ದರೂ, ಕಾರಣಾಂತರಗಳಿಂದ ನೆನೆಗುದಿಗೆ ಬಿದ್ದಿದೆ. ಆದರೆ ಈ ವರ್ಷದಿಂದ ಕ್ರಿಯಾತ್ಮಕವಾಗಿದೆ. ಮುಂದಿನ ದಿನಗಳಲ್ಲಿ ಈ ಕ್ರೀಡೆ ಮುನ್ನೆಲೆಗೆ ಬರಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಿ.ಶ್ರೀಧರ್ ಶೆಟ್ಟಿ ವಹಿಸಿದ್ದರು.
ಸಮಾರಂಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸದಸ್ಯ ಅರುಣ್ ವಿಟ್ಲ, ದ.ಕ. ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್, ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಪ್ರಸಾದ್ ರೈ, ಎಡಪದವು ಸ್ವಾಮಿ ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ರಘುನಾಥ ಬಿ. ಎಸ್., ಬಂಟ್ವಾಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ, ಉದ್ಯಮಿಗಳಾದ ರಾಧಾಕೃಷ್ಣ ನಾಯಕ್, ಬಾಬು ಕೆ. ವಿ., ರೋಟರಿ ಅಧ್ಯಕ್ಷ ಸಿ.ಹೆಚ್. ಹರೀಶ್ ಪೂಜಾರಿ, ವಿಟ್ಲ ಲಯನ್ಸ್ ಅಧ್ಯಕ್ಷ ರಜಿತ್ ಆಳ್ವ, ಜೆಸಿಐ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ಜಿಲ್ಲಾ ವೈಟ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ವೈಟ್ ಲಿಫ್ಟಿಂಗ್ ಕೋಚ್ ಸರಸ್ವತಿ ಪುತ್ರನ್ ಉಪಸ್ಥಿತರಿದ್ದರು.
ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲ ಜಯರಾಮ ರೈ ಡಿ. ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಪ್ರಸ್ತಾವನೆಗೈದರು. ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ವಂದಿಸಿದರು.
ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದ ಮೊದಲು ವಿಟ್ಲ ಚಂದ್ರನಾಥ ಬಸದಿಯಿಂದ ವೈಭವೋಪೇತ ಮೆರವಣಿಗೆ ನಡೆಯಿತು.




