ಮಂಗಳೂರು: ದಿವಂಗತ ಶ್ರೀ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ದಿನ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಅ.31ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಮೆಸ್ಕಾಂ ತಾಂತ್ರಿಕ ನಿರ್ದೇಶಕರಾದ ಹರೀಶ್ ಕುಮಾರ್. ವಿ, ಮುಖ್ಯ ಆರ್ಥಿಕ ಅಧಿಕಾರಿಗಳಾದ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರರಾದ ದೇವರಾಜ್, ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಎಸ್, ಮಂಜುನಾಥಸ್ವಾಮಿ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ ಶೆಟ್ಟಿ ಅವರು ಪ್ರಮಾಣ ವಚನ ವಿಧಿ ನಿರ್ವಹಿಸಿದರು.




