Breaking
21 Jun 2026, Sun

ಹೃದಯಾಘಾತದಿಂದ ಕಾಸರಗೋಡು ಮೂಲದ ವ್ಯಕ್ತಿ ನಿಧನ

ಕಾಸರಗೋಡು: ಬೆಂಗಳೂರಿನಲ್ಲಿರುವ ಮಗನ ಮನೆಗೆಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಾಸರಗೋಡು ಅನಂಗೂರು ನಿವಾಸಿ ಕೆ.ಕೆ.ಅಶೋಕನ್(75) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿರುವ ಮಗನ ಮನೆಗೆಂದು ಅವರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಹಾಸನ ತಲುಪಿದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಹಾಸನ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.

ಮೃತರು ಮಕ್ಕಳು, ಸೊಸೆ, ಸಹೋದರ, ಸಹೋದರಿಯರು ಸೇರಿದಂತೆ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *