ನವದೆಹಲಿ: ನವೆಂಬರ್ ತಿಂಗಳ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದ್ದು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ತೈಲ ಮಾರುಕಟ್ಟೆ ಕಂಪನಿಗಳ ಅಧಿಸೂಚನೆಯ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ನವೆಂಬರ್ 1 ರಿಂದ ರೂ. 4.5 ರಿಂದ ರೂ. 6.5 ವರೆಗೆ ಇಳಿಸಲಾಗಿದೆ.

ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಈ ತಿಂಗಳು ಯಾವುದೇ ಬದಲಾವಣೆ ಆಗಿಲ್ಲ. ಈ ಬೆಲೆಗಳು ಏಪ್ರಿಲ್ 2025 ರಿಂದ ಸ್ಥಿರವಾಗಿಯೇ ಇವೆ.
ಕಮರ್ಷಿಯಲ್ LPG ಸಿಲಿಂಡರ್ ಬೆಲೆಯು ದೆಹಲಿಯಲ್ಲಿ 1,590.50 ರೂ. ಆಗಿದೆ. ಕೋಲ್ಕತ್ತಾದಲ್ಲಿ 1694ರೂ, ಮುಂಬೈನಲ್ಲಿ 1542 & ಚೆನ್ನೈನಲ್ಲಿ 1750 ರೂ. ಆಗಿದೆ. ತೈಲ ಕಂಪೆನಿಗಳು ಪ್ರತಿ ತಿಂಗಳ ಮೊದಲ ದಿನ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಪರಿಷ್ಕರಣೆ ಮಾಡುತ್ತದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿರುವುದು ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅನುಕೂಲವಾಗಲಿದೆ.





