Breaking
19 Sep 2026, Sat

70ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯದ ಹಲವು ಶಾಲೆಗಳ ಮಕ್ಕಳು ಪಾಲ್ಗೊಂಡು ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಈ ಸಂದರ್ಭ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *