ನವದೆಹಲಿ: ಸೌದಿ ಅರೇಬಿಯಾದ ಜೆದ್ದಾದಲ್ಲಿ ಕಳೆದ ಅ.16ರಂದು ಪೊಲೀಸರು ಹಾಗೂ ಮದ್ಯ ಸ್ಮಗ್ಲಿಂಗ್ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದೆ.

ಜಾರ್ಖಂಡ್ ಮೂಲದ ವಿಜಯ್ ಕುಮಾರ್ ಮಹತೊ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್‌ಪಾನಿಯಾ ಗ್ರಾಮದವರು. ಟವರ್ಲೈನ್ ಫಿಟ್ಟರ್ ಆಗಿ ಕಳೆದ ಒಂಬತ್ತು ತಿಂಗಳಿಂದ ಸೌದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಹುಂಡೈ ಇಂಜಿನಿಯರಿಂಗ್ ಆಂಡ್ ಕನ್‌ಸ್ಟ್ರಕ್ಷನ್ ಕಂಪನಿಯಲ್ಲಿ ಕಳೆದ ಒಂಬತ್ತು ತಿಂಗಳಿಂದ ಟವರ್‌ಲೈನ್ ಫಿಟ್ಟರ್ ಆಗಿ ನೌಕರಿ ಮಾಡುತ್ತಿದ್ದ ವಿಜಯ್ ಕುಮಾರ್ ಕಂಪನಿಯ ಅಧಿಕಾರಿಗಳ ಸೂಚನೆಯಂತೆ ಅ.16ರಂದು ಸೈಟ್‌ನಿಂದ ಮೆಟಿರಿಯಲ್‌ಗಳನ್ನು ತರಲು ಹೋಗಿದ್ದರು.

ಈ ವೇಳೆ ಅಲ್ಲಿ ಪೊಲೀಸರು ಮತ್ತು ಲಿಕ್ಕರ್ ಸ್ಮಗ್ಲರ್‌ಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿತ್ತು. ಇದರ ಅರಿವಿಲ್ಲದೆ ಅಲ್ಲಿಗೆ ಹೋದ ವಿಜಯ್ ಕುಮಾರ್ ಪೊಲೀಸರು ಹಾರಿಸಿದ ಗುಂಡು ಬಡಿದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.


