Breaking
21 Jun 2026, Sun

ಯಕ್ಷಗಾನದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನ್ನಿಲ್ಲ

ವಿಟ್ಲ: ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.01ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಶಂಭು ಶರ್ಮ ಅವರು ಶೇಣಿ ಗೋಪಾಲಕೃಷ್ಣ ಭಟ್ ಸಹಿತ ಖ್ಯಾತನಾಮರೊಂದಿಗೆ ಅರ್ಥಗಾರಿಕೆ ಮಾಡಿದ್ದರು. ಇವರು ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲಿ ಚಿರಪರಿಚಿತ. ಖಳಪಾತ್ರ ಸಹಿತ ಯಾವುದೇ ಪಾತ್ರ ವಹಿಸಿದರೂ ಶಂಭು ಶರ್ಮ ಅವರ ಅರ್ಥಗಾರಿಕೆ ಅಪಾರ ಅಭಿಮಾನಿಗಳಿದ್ದರು.

ಶಂಭು ಶರ್ಮ ಅವರಿಗೆ ಯಕ್ಷರಂಗ ಪ್ರಶಸ್ತಿ, ಪೆರ್ಲ ಕೃಷ್ಣ ಭಟ್ಟ ಪ್ರಶಸ್ತಿ, ವಿಟ್ಲ ಜೋಶಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆತಿವೆ.

ಮೃತರು ಪತ್ನಿ ಹಾಗೂ ಪುತ್ರ ಸಹಿತ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *