Breaking
23 Dec 2024, Mon

ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ

ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ವಾಗ್ದಾಳಿ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು” ಸಿಪಿ ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ ಎಂದರು. ಸಿಪಿ ಯೋಗೇಶ್ವರ್​ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ವಿ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಹೋಗಿ ಹೋಗಿದ್ದಾರೆ. ಕಾಂಗ್ರೆಸ್​ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್​ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗುವುದಿಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್​ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.

ಸಿಪಿ ಯೋಗೇಶ್ವರ್​ ಸೈಕಲ್ ಗುರುತು, ಬಿಎಸ್​ಪಿ ಎಲ್ಲ ಮುಗಿಸಿಕೊಂಡು ನಮ್ಮ ಪಕ್ಷಕ್ಕೆ ಬಂದವರು. ಅವರು ಸೈದ್ಧಾಂತಿಕವಾಗಿ ನಮ್ಮ ಪಕ್ಷದಲ್ಲಿ ಇದ್ದವರಲ್ಲ. ಚನ್ನಪಟ್ಟಣದಲ್ಲಿ ಬಿಜೆಪಿ ವೋಟ್ ಅಲ್ಲೇ ಇರುತ್ತೆ. ನಾನು, ಪ್ರಹ್ಲಾದ್ ಜೋಶಿ ಅವರು ಜೆಡಿಎಸ್ ಟಿಕೆಟ್ ಅಂತ ಸಿಪಿ ಯೋಗೇಶ್ವರ್​ ಅವರಿಗೆ ಹೇಳಿದ್ವಿ. ಹೆಚ್​ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೇಳಿದ್ದರು. ಆದರೆ, ಸಿಪಿ ಯೋಗೇಶ್ವರ್​ ಒಪ್ಪಲಿಲ್ಲ ಎಂದು ತಿಳಿಸಿದರು.

ಇವರು ಈಗ ಕಾಂಗ್ರೆಸ್​ಗೆ ಹೋಗಿದ್ದಾರೆ, ಇದು ಪಕ್ಷಕ್ಕೆ ದ್ರೋಹ ಬಗೆದಂತೆ. ರಾಜ್ಯದ ಎಲ್ಲ ಬಿಜೆಪಿ ನಾಯಕರು ಅವರ ಪರವಾಗಿ ಇದ್ದೆವುಟಿಕೆಟ್ ಕೊಡಿಸುವ ಸಲುವಾಗಿ ಪ್ರಯತ್ನ ಮಾಡಿದ್ವಿ. ಬಿಜೆಪಿ ಚಿಹ್ನೆ, ಜೆಡಿಎಸ್ ಚಿಹ್ನೆ ಅಂತಲ್ಲ. ಎನ್​ಡಿಎ ಗೆಲ್ಲುವುದು ಮುಖ್ಯ. ಎನ್‌ಡಿಎನಲ್ಲಿ ಅವರಿಗೆ ಸೀನಿಯಾರಿಟಿ ಇತ್ತು. ಈಗ ಹೋಗಿ ಲಾಸ್ಟ್​​ನಲ್ಲಿ ಕೂತಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಎನ್​ಡಿಎಗೆ ಮುಖಭಂಗ ಮಾಡುವ ಉದ್ದೇಶ ಕಾಂಗ್ರೆಸ್​ಗೆ ಇದೆ. ಜೆಡಿಎಸ್​ನವರು ಯಾರಿಗೆ ಟಿಕೆಟ್ ಕೊಟ್ಟರು ನಾವು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *