Breaking
22 Mar 2026, Sun

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ – ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: 70ನೇ ಕನ್ನಡ ರಾಜ್ಯೋತ್ಸವವನ್ನು ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.1 ರಂದು ಆಚರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ.

ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ.

ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ. 83 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿರುವ ಅಂಶ ಅಧ್ಯಯನದಿಂದ ಬಹಿರಂಗವಾಗಿದೆ ಎಂದರು.

ಇದಕ್ಕೂ ಮೊದಲು ಸಚಿವರು ಗೌರವ ರಕ್ಷೆ ಸ್ವೀಕರಿಸಿ ಪಥ ಸಂಚಲನ ವೀಕ್ಷಿಸಿದರು. ಜಿಲ್ಲಾಮಟ್ಟದಲ್ಲಿ 77 ಸಾಧಕರು ಮತ್ತು ಸಂಘಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *