Breaking
22 Mar 2026, Sun

ರಾಮನಗರದ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 130ಕ್ಕೂ ಹೆಚ್ಚು ಯುವಕ-ಯುವತಿಯರ ಬಂಧನ

ರಾಮನಗರ: ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌ ಸ್ಟೇ ಒಂದರಲ್ಲಿ ರೇವ್‌ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.

ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಮಧ್ಯರಾತ್ರಿ 3ಗಂಟೆಗೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಿದ್ದಾರೆ.

ಈ ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ.

ಈ ಬಗ್ಗೆ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *