Breaking
22 Mar 2026, Sun

ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ನೈನಾಡಿನ ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿ)ಗೆ ಈ ಬಾರಿಯ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿ) ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ.

ನೂರಾರು ಸಾಮಾಜಿಕ ಸೇವೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಒಂದು ಗ್ರಾಮದಲ್ಲಿ ಯಾರು ಊಹಿಸದ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿರುವುದು ಈ ಪ್ರಶಸ್ತಿ ಈ ಸಂಸ್ಥೆಗೆ ಬರಲು ಮುಖ್ಯ ಕಾರಣವಾಗಿದೆ.

ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಬಗ್ಗೆ ಮಹತ್ಕಾಂಕ್ಷೆಯ ಯೋಜನೆಗಳನ್ನು ಹಾಕಿಕೊಂಡಿರುವ ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ನಯನಾಡು ತನ್ನ ಸೇವೆಯ ಮೂಲಕ ಈಗ ನಾಡಿನ ಗಮನ ಸೆಳೆದಿದೆ.

ನೆಹರು ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರಿಂದ ಟ್ರಸ್ಟಿನ ಗೌರವಾಧ್ಯಕ್ಷ
ನೆಲ್ವಿಸ್ಟರ್ ಗ್ಲಾನ್ ಪಿಂಟೋ, ಅಧ್ಯಕ್ಷರಾದ ಡಾನ್ ಪ್ರವೀಣ್ ಕಾಸ್ತಾ, ಕಾರ್ಯದರ್ಶಿ ಅನಿಲ್ ರೋಶನ್. ಅವಿಲ್ ಮೊರಸ್ ಹಾಗೂ ಇತರ ಸದಸ್ಯರು ಪ್ರಶಸ್ತಿಯನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *