ವಿಟ್ಲದಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ವಿಟ್ಲದ ಅಳಿಕೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಳಿಕೆ ಗ್ರಾಮದ ಇಸ್ಮಾಯಿಲ್ (37) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ ಅವರು ಅಲ್ಯೂಮಿನಿಯಂ ಪೈಪ್ ಬಳಸಿ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದಾಗ ಆ ಪೈಪ್ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ.

ತಕ್ಷಣವೇ ಇಸ್ಮಾಯಿಲ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *