ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ : ಓರ್ವ ಸಾವು, ಇನ್ನೋರ್ವ ಗಂಭೀರ

ಕಾಸರಗೋಡು: ಮಂಜೇಶ್ವರ ವಾಮಂಜೂರು ಬಳಿ ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪೈವಳಿಕೆ ಕಳಾಯಿಯ ಗೋಪಾಲಕೃಷ್ಣ ನಲ್ಲೂರಾಯ (66) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಶಿವಶಂಕರ್‌ ಎಂದು ಗುರುತಿಸಲಾಗಿದೆ.

ಪೂಜಾ ಕಾರ್ಯಕ್ಕಾಗಿ ತೆರಳುತ್ತಿದ್ದ ವೇಳೆ ಗೋಪಾಲಕೃಷ್ಣ ರವರ ಸ್ಕೂಟರ್‌ ಮತ್ತು ಇನ್ನೊಂದು ಸ್ಕೂಟರ್‌ ಪರಸ್ಪರ ಡಿಕ್ಕಿ ಹೊಡೆದಿದೆ. ಪರಿಣಾಮ ಗೋಪಾಲಕೃಷ್ಣ ಅವರಿಗೆ ಗಂಭೀರ ಗಾಯವಾಗಿದ್ದು ತಕ್ಷಣವೇ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *