Breaking
25 Sep 2026, Fri

ಇತಿಹಾಸ ಬರೆದ ಭಾರತ : ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ

ಮುಂಬೈ: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025ರ ಮಹಿಳಾ ವಿಶ್ವಕಪ್‌ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ. ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.

ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.

Leave a Reply

Your email address will not be published. Required fields are marked *