ಉಡುಪಿ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಓವ೯ರು ಹೃದಯಾಘಾತದಿಂದ ಮೃತಪಟ್ಟ ಘಟನೆ ನ. 01ರಂದು ನಡೆದಿದೆ.
ಮೃತರನ್ನು ವಿಶ್ವನಾಥ್ (56) ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಅವರು ಮೃತಪಟ್ಟಿದ್ದಾರೆ.

ವಿಶ್ವನಾಥ್ ಅವರು ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎಂದು ತಿಳಿದುಬಂದಿದೆ.



