Breaking
21 Mar 2026, Sat

ಪುತ್ತೂರಿನಲ್ಲಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ : ನಾಲ್ಕೂವರೆ ವಷ೯ದ ಕಂದಮ್ಮ ಸಾವು

ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ.

ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಬಸ್ ಓವರ್‌ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ.

ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್‌ನ ಓವರ್‌ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಸಾವನ್ನಪ್ಪಿದ್ದಾಳೆ.

ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯವಾಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ ಹಾಗೂ ಉಳಿದವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *