ಬಂಟ್ವಾಳ: ಮಾಣಿ ಸಮೀಪದ ಕೊಡಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ ಘಟನೆ ನ.2 ರಂದು ನಡೆದಿದೆ.

ಮಂಗಳೂರಿನಿಂದ ಬರುತ್ತಿದ್ದ ಓಮ್ನಿ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕೊಡಾಜೆಯಲ್ಲಿ ವೀಲ್ ತುಂಡಾಗಿ ರಸ್ತೆ ಸಮೀಪದ ಹೊಂಡಕ್ಕೆ ಪಲ್ಟಿಯಾಗಿದೆ. ಪರಿಣಾಮ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





