ಮಂಗಳೂರು: ಮನೆಯೊಂದರ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿದ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ನಗರದ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ನ.02ರಂದು ನಡೆದಿದೆ.

ಸಂಜೆಯ ವೇಳೆಗೆ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ತಕ್ಷಣ ಮನೆಯ ಬಾಗಿಲು ಮುರಿದು ಒಳಹೊಕ್ಕು ಬೆಂಕಿ ನಂದಿಸಿದ್ದಾರೆ.

ಪೀಠೋಪಕರಣಗಳು, ಬಟ್ಟೆಬರೆ, ನಗದು, ಪಾಸ್‌ಪೋರ್ಟ್ ಸಹಿತ ಮನೆಯ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಅವಘಡ ಸಂಭವಿಸಿದ್ದು, ಈ ಮೂಲಕ ಬಹುದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.




