Breaking
25 Sep 2026, Fri

ನಾಳೆಯಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಮೀನುಗಾರರು ಎಚ್ಚರಿಕೆಯಿ೦ದ ಇರುವಂತೆ ಸೂಚಿಸಲಾಗಿದ್ದು, ದೀಪಾವಳಿ ಹಬ್ಬದ ನಂತರ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆ೦ಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *