Breaking
24 Jun 2026, Wed

ಸ್ಕೂಟರ್ ಹಾಗೂ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ಸ್ಕೂಟರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.3 ರಂದು ನಡೆದಿದೆ.

ಮೃತರನ್ನು ಎನ್.ಹರೀಶ್ ಕುಮಾರ್ (37) ಎಂದು ಗುರುತಿಸಲಾಗಿದೆ.

ಕಾಸರಗೋಡಿನಿಂದ ಕುಂಬಳೆ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಹಾಗೂ ಕುಂಬಳೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಹರೀಶ್ ಕುಮಾರ್ ರನ್ನು ತಕ್ಷಣವೇ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ.

ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *