ಸುಳ್ಯದಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಸುಳ್ಯ : ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ.

ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


Leave a Reply

Your email address will not be published. Required fields are marked *