Breaking
25 Sep 2026, Fri

ಉಪ್ಪಿನಂಗಡಿಯಲ್ಲಿ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಉಪ್ಪಿನಂಗಡಿ: ಹೋಟೆಲೊಂದರ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ನ.4 ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೃತರನ್ನು ಗಣೇಶ್ ನಾಯ್ಕ (60) ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಎಂದು ತಿಳಿದುಬಂದಿದೆ.

ಇವರು ಉಪ್ಪಿನಂಗಡಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಆಯತಪ್ಪಿ ಕೆಳಗಿನ ತೋಡಿಗೆ ಬಿದ್ದು ತಲೆಗೆ ಗಂಭೀರವಾಗಿಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮಗ ಜಗದೀಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಈ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *